30ಕ್ಕೂ ಹೆಚ್ಚು ಜನರಿದ್ದ ಬಸ್ ಅಪಘಾತ
ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರಿದ್ದ ಬಸ್
ವಿಪತ್ತು ನಿರ್ವಹಣಾ ಪಡೆಯಿಂದ ರಕ್ಷಣಾ ಕಾರ್ಯಚರಣೆ
30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್ ಕಮರಿಗೆ ಉರುಳಿ ಬಿದ್ದ ಭೀಕರ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಉತ್ತರಖಂಡಾದ ಅಲ್ಮೋರಾದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಬಸ್ ಕಮರಿಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 15 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಬಂದಿದೆ. ಸ್ಥಳದಲ್ಲಿ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ಪಡೆ ಮೂರು ತಂಡಗಳಾಗಿ ರಕ್ಷಣಾ ಕಾರ್ಯಚರಣೆ ಮಾಡುತ್ತಿದ್ದಾರೆ.
ಉತ್ತರಖಂಡಾದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಸದ್ಯ ಘಟನಾ ಸ್ಥಳದಿಂದ ಗಾಯಾಳುಗಳನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ.