ಆಫೀಸ್ ಮುಗಿಸಿಕೊಂಡು ಬಸ್ಸು ನಿಲ್ದಾಣಕ್ಕೆ ಬಂದಿದ್ದ ಸಂಧ್ಯಾ
ಬೆನ್ಜ್ ಕಾರು ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿ ಸ್ಥಳದಲ್ಲೇ ಸಾವು
ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಬೆನ್ಜ್ ಕಾರು ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕೆಂಗೇರಿ ಬಸ್ಸು ನಿಲ್ದಾಣದ ಬಳಿ ನಡೆದಿದೆ. ಸಂಧ್ಯಾ (30) ಮೃತ ಟೆಕ್ಕಿ.
ನಿನ್ನೆ ಆಫೀಸ್ ಮುಗಿಸಿಕೊಂಡು ಕೆಂಗೇರಿ ಬಸ್ಸು ನಿಲ್ದಾಣಕ್ಕೆ ಬಂದಿದ್ದರ ಮೃತ ಸಂಧ್ಯಾ. ಅಲ್ಲಿಂದ ಮನೆಗೆ ಹೋಗಲು ರಸ್ತೆ ದಾಟುವಾಗ ವೇಗವಾಗಿ ಬಂದ ಬೆನ್ಜ್ ಕಾರು ಏಕಾಏಕಿ ಡಿಕ್ಕಿಯಾಗಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಯುವತಿ ಸಾವನ್ನಪ್ಪಿದ್ದಾರೆ.
ಇನ್ನು, ಯುವತಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ ಯುವಕರನ್ನ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.