Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Tv News
  • Bypoll; ಜಿ.ಟಿ ದೇವೇಗೌಡ, ಹೆಚ್​.ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಜೆಡಿಎಸ್
0
prajadhvani
Wednesday, 30 October 2024 / Published in Tv News

Bypoll; ಜಿ.ಟಿ ದೇವೇಗೌಡ, ಹೆಚ್​.ಡಿ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಜೆಡಿಎಸ್

  • ಜೆಡಿಎಸ್​ನ ಕೋರ್ ಕಮಿಟಿ ಅಧ್ಯಕ್ಷ ಆಗಿರುವ ಜಿ.ಟಿ.ದೇವೇಗೌಡ
  • ಪಟ್ಟಿಯಲ್ಲಿ ಹಾಲಿ, ಮಾಜಿ, ಹಿರಿಯ ನಾಯಕರ ಹೆಸರುಗಳು ಇವೆ
  • ಬೈಎಲೆಕ್ಷನ್​ಗೆ ಸ್ಪರ್ಧೆ ಮಾಡಿರುವ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಲಿಸ್ಟ್​ನಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣರನ್ನ ಕೈ ಬಿಡಲಾಗಿದೆ.

ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಿದ್ದು ಈ ಸಂಬಂಧ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೆಸರನ್ನು ಕೈ ಬಿಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್​​ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್​ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರನ್ನು ಮಾತ್ರ ನಮೂದು ಮಾಡಿಲ್ಲ. ಇದಕ್ಕೆ ಕಾರಣ ಕೂಡ ಇದೆ.

ಜೆಡಿಎಸ್​ನಲ್ಲಿ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಜಿ.ಟಿ ದೇವೇಗೌಡ ಅವರು ಬೇಸರಗೊಂಡಿದ್ದರು. ಅಲ್ಲದೇ ಇತ್ತೀಚಿನ ಮೈಸೂರು ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಇದೇ ವೇಳೆ ಮೈಸೂರು ದಸರಾದಲ್ಲಿ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಕೇಂದ್ರ ಸಚಿವ ಹೆಚ್​​.ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಹೆಚ್​​.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್​ ಆಗಿದೆ ಅವರು ರಾಜೀನಾಮೆ ನೀಡುತ್ತಾರಾ ಎಂದು ಸಮಾರಂಭದಲ್ಲಿ ವಾಗ್ದಾಳಿ ನಡೆಸಿದ್ದರು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಕಾರಣಗಳಿಂದ ಜೆಡಿಎಸ್​ನ ಸ್ಟಾರ್ ಕ್ಯಾಂಪೇನರ್​ ಪಟ್ಟಿಯಿಂದ ಜಿ.ಟಿ ದೇವೇಗೌಡರನ್ನ ಕೈಬಿಡಲಾಗಿದೆ ಎನ್ನಲಾಗಿದೆ. ಮಾಜಿ ಸಚಿವರಾಗಿರುವ ಹೆಚ್​.ಡಿ ರೇವಣ್ಣ ಕುಟುಂಬದ ಮೇಲೆ ಕೆಲ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ಹೆಸರು ಇದರಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ.

What you can read next

ಮಾಸದ ಮಗನ ನೆನಪು.. ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ
ಕೊನೆಗೂ ತುಮಕೂರಲ್ಲಿ ಸಿಕ್ಕಿಬಿದ್ದ! ಮಟನ್ ಮುಬಾರಕ್​​ನ ಅಸಲಿ ಕತೆಯನ್ನ ಈ ಫೋಟೋ ಹೇಳ್ತಿದೆ!
ರೈತರ ಭೂಮಿ ಮೇಲೆ ವಕ್ಫ್​ ಕಣ್ಣು ಹಾಕಿತಾ..? ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP