- ಹಬ್ಬದ ಮೂಡ್ಗೆ ಜಾರಿರುವ ಜನರಿಗೆ ಬಂದಿದೆ ಎಚ್ಚರಿಕೆ
- ಹಬ್ಬದ ಕೆಲಸಗಳು ಇನ್ನೂ ಪೆಂಡಿಂಗ್ ಇದ್ದರೆ ಒಮ್ಮೆ ಯೋಚಿಸಿ
- ಅಕ್ಟೋಬರ್ 31 ರಿಂದ ದೀಪಾವಳಿ ಹಬ್ಬ ಆರಂಭ ಆಗಲಿದೆ
ದೀಪಾವಳಿ ಅವಧಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ ಬಂದರೂ ಚಳಿಗಾಲ ಸದ್ಯಕ್ಕೆ ಇಲ್ಲ. ಕೆಲವು ರಾಜ್ಯಗಳಲ್ಲಿ ರಾತ್ರಿ ವೇಳೆ ವಾತಾವರಣ ತಂಪಾಗಿದ್ದರೂ, ಬಿಸಿಲಿನ ಅಬ್ಬರ ಜೋರಾಗಿರಲಿದೆ. ಅನೇಕ ರಾಜ್ಯಗಳಲ್ಲಿ ಮಳೆ ಎಚ್ಚರಿಕೆಯಿದ್ದು ದೀಪಾವಳಿ ಹಬ್ಬಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದೆಹಲಿ, ಉತ್ತರ ಪ್ರದೇಶ ಮತ್ತು ಒಡಿಶಾದಲ್ಲಿ ಹವಾಮಾನ ಸದ್ಯ ಯೋಗ್ಯವಾಗಿದೆ. ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ. ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದದಲ್ಲೂ ಚಂಡಮಾರುತ ಇದೆ.
ಯಾವೆಲ್ಲ ರಾಜ್ಯದಲ್ಲಿ ಮಳೆ?
ಅಕ್ಟೋಬರ್ 31ರಿಂದ ನವೆಂಬರ್ 1ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಕರಾವಳಿ ಲಕ್ಷದ್ವೀಪ ಮತ್ತು ದಕ್ಷಿಣ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮುಂದಿನ ಏಳು ದಿನ ಮಳೆ
ಅಕ್ಟೋಬರ್ 31 ರಿಂದ ನವೆಂಬರ್ 3 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಅಲ್ಲಲ್ಲಿ ಮಳೆಯಾಗಬಹುದು. ಅಕ್ಟೋಬರ್ 30 ರಿಂದ ನವೆಂಬರ್ 2 ರವರೆಗೆ ಕರ್ನಾಟಕದ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 3 ರವರೆಗೆ ಕೇರಳ, ಮಾಹಿ ಮತ್ತು ಲಕ್ಷದ್ವೀಪಗಳಲ್ಲಿ ತುಂತುರು ಮಳೆಯಾಗಬಹುದು. ನವೆಂಬರ್ 1 ರಿಂದ 3 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.