- ಜೆಡಿಎಸ್ನ ಕೋರ್ ಕಮಿಟಿ ಅಧ್ಯಕ್ಷ ಆಗಿರುವ ಜಿ.ಟಿ.ದೇವೇಗೌಡ
- ಪಟ್ಟಿಯಲ್ಲಿ ಹಾಲಿ, ಮಾಜಿ, ಹಿರಿಯ ನಾಯಕರ ಹೆಸರುಗಳು ಇವೆ
- ಬೈಎಲೆಕ್ಷನ್ಗೆ ಸ್ಪರ್ಧೆ ಮಾಡಿರುವ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಲಿಸ್ಟ್ನಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣರನ್ನ ಕೈ ಬಿಡಲಾಗಿದೆ.
ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ನಿಂದ ಸ್ಪರ್ಧೆ ಮಾಡುತ್ತಿದ್ದು ಈ ಸಂಬಂಧ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೆಸರನ್ನು ಕೈ ಬಿಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರನ್ನು ಮಾತ್ರ ನಮೂದು ಮಾಡಿಲ್ಲ. ಇದಕ್ಕೆ ಕಾರಣ ಕೂಡ ಇದೆ.
ಜೆಡಿಎಸ್ನಲ್ಲಿ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಜಿ.ಟಿ ದೇವೇಗೌಡ ಅವರು ಬೇಸರಗೊಂಡಿದ್ದರು. ಅಲ್ಲದೇ ಇತ್ತೀಚಿನ ಮೈಸೂರು ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಇದೇ ವೇಳೆ ಮೈಸೂರು ದಸರಾದಲ್ಲಿ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ಆಗಿದೆ ಅವರು ರಾಜೀನಾಮೆ ನೀಡುತ್ತಾರಾ ಎಂದು ಸಮಾರಂಭದಲ್ಲಿ ವಾಗ್ದಾಳಿ ನಡೆಸಿದ್ದರು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಕಾರಣಗಳಿಂದ ಜೆಡಿಎಸ್ನ ಸ್ಟಾರ್ ಕ್ಯಾಂಪೇನರ್ ಪಟ್ಟಿಯಿಂದ ಜಿ.ಟಿ ದೇವೇಗೌಡರನ್ನ ಕೈಬಿಡಲಾಗಿದೆ ಎನ್ನಲಾಗಿದೆ. ಮಾಜಿ ಸಚಿವರಾಗಿರುವ ಹೆಚ್.ಡಿ ರೇವಣ್ಣ ಕುಟುಂಬದ ಮೇಲೆ ಕೆಲ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅವರ ಹೆಸರು ಇದರಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ.